• January 2, 2026

ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ ವಿಜಯ್ ದೇವರಕೊಂಡ

ಟಾಲಿವುಡ್ ನಟ ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಲೈಗರ್ ಸಿನಿಮಾ ಬಿಡುಗಡೆಗೆ ಕೆಲವೇ ಕೆಲವು ದಿನಗಳು ಮಾತ್ರ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಇಂದು ಸಿನಿಮಾದ ಪ್ರಚಾರದ ಸಲುವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ ನಟ ವಿಜಯ್ ದೇವರಕೊಂಡ ಹಾಗೂ ನಟಿ ಅನನ್ಯಾ ಪಾಂಡೆ ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ್ದಾರೆ.  ಪುನೀತ್ ರಾಜ್ ಕುಮಾರ್ ನಿಧನರಾಗಿ ಹಲವು ತಿಂಗಳುಗಳೇ ಕಳೆದಿದೆ. ಆದರೆ ಅಭಿಮಾನಿಗಳ ಮನಸ್ಸಲ್ಲಿ ಪುನೀತ್ ಇನ್ನೂ ಜೀವಂತವಾಗಿಯೇ ಇದ್ದಾರೆ. ಬೆಂಗಳೂರಿಗೆ ಯಾವುದೇ ಕಲಾವಿದರು ಬಂದರು ಮೊದಲು ಅಪ್ಪು ಪುಣ್ಯ ಭೂಮಿಗೆ ಬೇಟಿ ನೀಡುತ್ತಾರೆ. ಅಂತೆಯೇ ಇಂದು ಕೂಡ ವಿಜಯ್ ದೇವರಕೊಂಡ ಕಂಠೀರವ ಸ್ಟುಡಿಯೋದಲ್ಲಿ ಇರುವ ಪುನೀತ್ ರಾಜ್ ಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ್ದಾರೆ.       ಲೈಗರ್ ಸಿನಿಮಾದ ನಿರ್ದೇಶಕ ಪೂರಿ ಜಗನ್ನಾಥ್ ಹಾಗೂ ಡಾ.ರಾಜ್ ಕುಮಾರ್ ಕುಟುಂಬಕ್ಕೆ ಉತ್ತಮ ಸಂಬಂಧ ಇದೆ. ಪುನೀತ್ ರಾಜ್ ಕುಮಾರ್ ಹೀರೋ ಆಗಿ ನಟಿಸಿದ್ದ ಮೊದಲ ಸಿನಿಮಾ ಅಪ್ಪು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಪೂರಿ ಜಗನ್ನಾಥ್. ಲೈಗರ್ ಸಿನಿಮಾ ಆಗಸ್ಟ್ 25ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ವಿಜಯ್ ದೇವರಕೊಂಡಾಗೆ ಜೋಡಿಯಾಗಿ ನಟಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದು ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now