ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಒಟಿಟಿಯಲ್ಲಿ ‘ವಿಕ್ರಾಂತ್ ರೋಣ’ ಧಮಾಕ: 24 ಗಂಟೆಯಲ್ಲಿ ವೀಕ್ಷಣೆ ಆಗಿದ್ದು ಎಷ್ಟು ಗೊತ್ತಾ?
ಜುಲೈ 28ರಂದು ಬಿಗ್ ಸ್ಕ್ರೀನ್ ನಲ್ಲಿ ದಿಬ್ಬಣ ಹೊರಟಿದ್ದ ವಿಕ್ರಾಂತ್ ರೋಣನಿಗೆ ಸುದೀಪಿಯನ್ಸ್ ಬಹುಪರಾಕ್ ಎಂದಿದ್ದರು. ತ್ರಿಡಿಯಲ್ಲಿ ಕಿಚ್ಚನ ನಯಾ ಅವತಾರ ಕಣ್ತುಂಬಿಕೊಂಡು ಫುಲ್ ಮಾರ್ಕ್ಸ್ ಕೊಟ್ಟಿದ್ದರು. ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿಬಂದಿದ್ದ ಈ ಚಿತ್ರದಲ್ಲಿ ಬಿಟೌನ್ ಬೊಂಬೆ ಜಾಕ್ವೆಲಿನ್ ಫರ್ನಾಂಡಿಸ್, ಅನೂಪ್ ಭಂಡಾರಿ, ನೀತಾ ಆಶೋಕ್ ಸೇರಿದಂತೆ ಹಲವರು ಅಭಿನಯಿಸಿದ್ದರು. ಜಾಕ್ ಮಂಜು ನಿರ್ಮಾಣದಲ್ಲಿ ಅದ್ಧೂರಿಯಾಗಿ ನಿರ್ಮಾಣಗೊಂಡಿದ್ದ ವಿಕ್ರಾಂತ್ ರೋಣ ಬಾಕ್ಸ್ ಆಫೀಸ್ ನಲ್ಲೂ ಕೋಟಿ-ಕೋಟಿ ಕಮಾಯಿ ಮಾಡಿತ್ತು.
ಅದ್ಧೂರಿ ಸೆಟ್ ನಲ್ಲಿ ಚಿತ್ರೀಕರಿಸಿದ್ದ ರಾ ರಾ ರಕ್ಕಮ್ಮ ಹಾಡು ಹಿಟ್ ಲೀಸ್ಟ್ ಸೇರಿತ್ತು. ಬಿ ಅಜನೀಶ್ ಲೋಕನಾಥ್ ಸಂಗೀತವಿದ್ದ ಎಲ್ಲಾ ಹಾಡುಗಳು ಪ್ರೇಕ್ಷಕ ಗಮನಸೆಳೆದಿದ್ದವು. ಸಿಲ್ವರ್ ಸ್ಕ್ರೀನ್ ನಲ್ಲಿ ಗುಮ್ಮನ ಆರ್ಭಟ ಮಿಸ್ ಮಾಡಿಕೊಂಡ ಪ್ರೇಕ್ಷಕರು ಈಗ ಕುಳಿತು ವಿಕ್ರಾಂತ್ ರೋಣ ಸಿನಿಮಾವನ್ನು ಕಣ್ತುಂಬಿಕೊಳ್ಳಬಹುದು.
