• December 22, 2025

ಸ್ಫೋಟಕ ಬ್ಯಾಟಿಂಗ್ ಮೂಲಕ ವಿಶೇಷ ದಾಖಲೆ ಬರೆದ ವಿರಾಟ್ ಕೋಹ್ಲಿ

ಗುವಾಹಟಿ: ಕಳೆದ ಕೆಲ ತಿಂಗಳ ಹಿಂದಷ್ಟೇ ಕಳಪೆ ಬ್ಯಾಟಿಂಗ್‌ ಪ್ರದರ್ಶಿಸಿ ಟೀಕೆಗೆ ಗುರಿಯಾಗಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿರುವ ಕೋಹ್ಲಿ 28 ಎಸೆತಗಳಲ್ಲಿ1 ಸಿಕ್ಸ್ ಹಾಗೂ 7 ಫೋರ್ ಗಳೊಂದಿಗೆ ಅಜೇಯ 49 ರನ್ ಭಾರಿಸಿದ್ದಾರೆ. ಈ ಮೂಲಕ ಕೋಹ್ಲಿ ವಿಶೇಷ ದಾಖಲೆ ಮಾಡಿದ್ದಾರೆ. ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ 49 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ T20 ಕ್ರಿಕೆಟ್‌ನಲ್ಲಿ 11 ಸಾವಿರ ರನ್‌ಗಳನ್ನು ಪೂರೈಸಿದ ಮೊದಲ ಭಾರತೀಯ ಆಟಗಾರನೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದಾರೆ. 2007 ರಿಂದ 2022 ರವರೆಗೆ ಐಪಿಎಲ್​ ಹಾಗೂ ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನ ಆಡಿರುವ ವಿರಾಟ್ ಕೊಹ್ಲಿ ಒಟ್ಟು 337 ಇನಿಂಗ್ಸ್​ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ವೇಳೆ 6 ಶತಕ ಹಾಗೂ 81 ಅರ್ಧಶತಕಗಳನ್ನೂ ಕೂಡ ವಿರಾಟ್ ಕೊಹ್ಲಿ ಸಿಡಿಸಿದ್ದರು. ಭಾನುವಾರ ವೇಯ್ನ್ ಪಾರ್ನೆಲ್ ಬೌಲಿಂಗ್‌ನಲ್ಲಿ ಭರ್ಜರಿ ಸಿಕ್ಸರ್‌ನೊಂದಿಗೆ 11 ಸಾವಿರ ರನ್ ಪೂರೈಸಿದ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now