ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವ್ಯಾಕ್ಸಿನ್ ಮೇಲೆ ಸಿನಿಮಾ ಮಾಡಲು ಮುಂದಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ
ದಿ ವ್ಯಾಕ್ಸಿನ್ ವಾರ್ ಸಿನಿಮಾ ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ತೆರೆಗೆ ಬರಲಿದೆಯಂತೆ. ಕೊರೋನಾ ಸಮಯದಲ್ಲಿ ವ್ಯಾಕ್ಸಿನ್ ಏನೆಲ್ಲ ಆವಾಂತರ ಸೃಷ್ಟಿಸಿತ್ತು? ಈ ವ್ಯಾಕ್ಸಿನ್ ಏನೆಲ್ಲ ಕೆಲಸ ಮಾಡಿತ್ತು? ವ್ಯಾಕ್ಸಿನ್ ಮಾಫಿಯಾದ ಬಗ್ಗೆ ಹಬ್ಬಿಕೊಂಡಿದ್ದ ಹಲವು ಅನುಮಾನಗಳ ಸುತ್ತು ದಿ ವ್ಯಾಕ್ಸಿನ್ ವಾರ್ ಸಿನಿಮಾದ ಕಥೆ ಹೆಣೆಯಲಾಗಿದೆಯಂತೆ.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ತಯಾರಿ ವೇಳೆಯಲ್ಲೇ ವ್ಯಾಕ್ಸಿನ್ ಬಗ್ಗೆ ಸಂಶೋಧನೆ ಮಾಡಿದ್ದರಂತೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. ಆದರೆ ಕೋವಿಡ್ ಕಾರಣದಿಂದಾಗಿ ಕಾಶ್ಮೀರ್ ಫೈಲ್ಸ್ ಶೂಟಿಂಗ್ ಮುಂದೂಡಲ್ಪಟ್ಟಾಗ ವ್ಯಾಕ್ಸಿನ್ ಕುರಿತು ಕಥೆ ರೆಡಿಮಾಡಿದ್ದರಂತೆ. ತಮ್ಮ ಸಂಶೋಧನೆಯಲ್ಲಿ ಕಂಡ ಅನುಭವಗಳನ್ನು ಈ ಸಿನಿಮಾದಲ್ಲಿ ವಿವೇಕ್ ಅಳವಡಿಸಿಕೊಂಡಿದ್ದಾರಂತೆ. ವ್ಯಾಕ್ಸಿನ ತಯಾರಿಕೆಯಲ್ಲಿ ಗೆದ್ದಿರುವ ವಿಜ್ಞಾನಿಗಳ ಶ್ರಮ, ಅದನ್ನು ಅಷ್ಟೇ ವೇಗವಾಗಿ ತಲುಪಿಸಿದ ರೋಚಕ ಕಥೆಯೂ ಈ ಸಿನಿಮಾದಲ್ಲಿ ಇರಲಿದೆಯಂತೆ.
