• December 21, 2025

ರಮ್ಯಾ ಬ್ಯಾನರ್ ನಲ್ಲಿ ಮೊದಲ ಸಿನಿಮಾದ ಅವಕಾಶ ಪಡೆದುಕೊಂಡ ಸ್ಯಾಂಡಲ್ ವುಡ್ ಸ್ಟಾರ್ ಡೈರೆಕ್ಟರ್

ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಯಾವಾಗ ಸಿನಿಮಾ ರಂಗಕ್ಕೆ ಬರ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿತ್ತು. ಇದೀಗ ನಿರ್ಮಾಪಕಿಯಾಗಿ ರಮ್ಯಾ ಗಾಂಧಿನಗರಕ್ಕೆ ಎಂಟ್ರಿಕೊಟ್ಟಿದ್ದು ಆ್ಯಪಲ್ ಬಾಕ್ಸ್ ಹೆಸರಿನಲ್ಲಿ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಪ್ರೊಡಕ್ಷನ್ ಹೌಸ್ ಬಗ್ಗೆ ಮಾಹಿತಿ ನೀಡಿದ್ದ ರಮ್ಯಾ ಮೊದಲ ದಿನವೇ ಎರಡು ಸಿನಿಮಾ ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಹೀಗಾಗಿ ರಮ್ಯಾ ಬ್ಯಾನರ್ ನಲ್ಲಿ ಯಾರು ಮೊದಲು ಸಿನಿಮಾ ಮಾಡುತ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಇದೀಗ ಸ್ಯಾಂಡಲ್ ವುಡ್ ಸ್ಟಾರ್ ನಿರ್ದೇಶಕನ ಹೆಸರು ಕೇಳಿ ಬಂದಿದೆ. ಮೂಲಗಳ ಪ್ರಕಾರ ರಮ್ಯಾ ಬ್ಯಾನರ್ ನ ಆ್ಯಪಲ್ ಹೌಸ್ ನಲ್ಲಿ ನಿರ್ದೇಶಕ ರಾಜ್ ಬಿ ಶೆಟ್ಟಿ ಸಿನಿಮಾ ಮಾಡುತ್ತಾರೆ ಎನ್ನಲಾಗುತ್ತಿದೆ. ಈ ಹಿಂದೆ ರಮ್ಯಾಗೆ ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಆ್ಯಪಲ್ ಹೌಸ್ನ ಮೊದಲ ಸಿನಿಮಾಗೆ ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಎರಡು ಹಂತದಲ್ಲಿ ಮಾತುಕತೆ ಕೂಡ ಮಾಡಿದ್ದಾರೆ. ಸ್ವತಃ ರಮ್ಯಾ ಮನೆಗೆ ಹೋಗಿ ಶೆಟ್ಟಿ ಅವರು ಕಥೆ ಕೂಡ ಹೇಳಿ ಬಂದಿದ್ದಾರೆ. ಮುಂದಿನ ಹಂತದ ಕೆಲಸಗಳಲ್ಲೂ ಅವರು ತೊಡಗಿದ್ದಾರೆ. ರಮ್ಯಾ ಅವರೇ ಈ ವಿಷಯವನ್ನು ಬಹಿರಂಗ ಪಡಿಸಲಿ ಎಂದು ಕಾಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ರಮ್ಯಾ ಅವರ ಮೊದಲ ನಿರ್ಮಾಣದ ಸಿನಿಮಾ ರಾಜ್ ಬಿ ಶೆಟ್ಟಿ ಅವರದ್ದೇ ಆಗಿರಲಿದೆ ಎನ್ನಲಾಗುತ್ತಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now