• June 19, 2026

ಕೆಜಿಎಫ್ 2 ಬಿಡುಗಡೆಯಾಗಿ 100 ದಿನ: ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಹೊಂಬಾಳೆ ಫಿಲ್ಮ್ಸ್

ಕನ್ನಡ ಸಿನಿಮಾ ರಂಗದ ದಿಕ್ಕನೇ ಬದಲಾಯಿಸಿದ್ದು ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ. ಈ ಚಿತ್ರ ಇಡೀ ವಿಶ್ವವೇ ಗಾಂಧಿನಗರದತ್ತ ತಿರುಗಿ ನೋಡುವಂತೆ ಮಾಡಿತ್ತು. ಇದೀಗ ಸಿನಿಮಾ ಬಿಡುಗಡೆ ಆಗಿ 100 ದಿನಗಳನ್ನು ಪೂರೈಸಿದೆ. ಈ ಸಂಭ್ರಮಕ್ಕೆ ಅಭಿಮಾನಿಗಳಿಗೆ ಹೊಂಬಾಳೆ ಫಿಲ್ಮ್ಸ್ ಧನ್ಯವಾದ ತಿಳಿಸಿದೆ. ಕೆಜಿಎಫ್ ಸಿನಿಮಾದ ತುಣಕನ್ನು ಹಂಚಿಕೊಳ್ಳುವ ಮೂಲಕ ಸಿನಿಮಾದ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಕೆಜಿಎಫ್ ಚಿತ್ರತಂಡ ಧನ್ಯವಾದ ತಿಳಿಸಿದೆ. ಕಳೆದ ಏಪ್ರಿಲ್ 14ರಂದು ಕೆಜಿಎಫ್ ಚಾಪ್ಟರ್ 2 ಸಿನಿಮಾ ತೆರೆಗೆ ಬಂದಿತ್ತು. ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಯಲ್ಲಿ ತೆರೆಕಂಡು ಎಲ್ಲಾ ಭಾಷೆಯಲ್ಲೂ ಸೂಪರ್ ಹಿಟ್ ಆಗಿತ್ತು. ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಹಾಗೂ ಶ್ರೀನಿಧಿ ಶೆಟ್ಟಿ ನಟನೆಯ ಸಿನಿಮಾ ಭರ್ಜರಿ ಓಪನಿಂಗ್ಸ್ ಪಡೆದುಕೊಂಡಿತ್ತು. ಕೆಜಿಎಫ್ 2 ಸಿನಿಮಾ 1250 ಕೋಟಿ ರೂಪಾಯಿ ಕಲೆಕ್ಷನ್ ಆಗಿದ್ದು ಹಿಂದಿಯಲ್ಲಿಯೇ 434 ಕೋಟಿ ಲಭಿಸಿತ್ತು. ವಿಜಯ್ ಕಿರಗಂದೂರು ನಿರ್ಮಾಣದ ಕೆಜಿಎಫ್ ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಂಖ್ಯೆ ದುಪ್ಪಟ್ಟಾಗಿದ್ದು ಪರಭಾಷೆಯಿಂದ ಸಾಕಷ್ಟು ಆಫರ್ ಗಳು ಬರ್ತಿವೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now