• January 1, 2026

ಹುಬ್ಬಳಿಯಲ್ಲಿ ಅದ್ದೂರಿಯಾಗ ನಡೆಯಿತು ಬನಾರಸ್ ಪ್ರೀರಿಲೀಸ್ ಕಾರ್ಯಕ್ರಮ

ಶಾಸಕ ಜಮೀರ್ ಅಹ್ಮದ್‌ಖಾನ್ ಅವರ ಪುತ್ರ ಝೈದ್‌ ಖಾನ್ ನಟನೆಯ ಬನಾರಸ್ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಅದ್ದೂರಿಯಾಗಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ ಆವರಣದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೆಲ್ ಬಾಟಂ ಖ್ಯಾತಿಯ ಜಯತೀರ್ಥ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಬನಾರಸ್ ಸಿನಿಮಾ ಈಗಾಗ್ಲೆ ಟ್ರೈಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದಿದೆ. ಮೊದಲ ಚಿತ್ರದಲ್ಲೇ ಝೈದ್ ಖಾನ್ ಭರವಸೆ ಮೂಡಿಸಿದ್ದು ಗಾಂಧಿನಗರದಲ್ಲಿ ಸ್ಟಾರ್ ನಟನಾಗಿ ಮಿಂಚುವ ಎಲ್ಲಾ ಲಕ್ಷಣಗಳು ಇವೆ. ಬನಾರಸ್ ಪ್ರೀರಿಲೀಸ್ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನೋದ್ ಪ್ರಭಾಕರ್, ಅಭಿಷೇಕ್ ಅಂಬರೀಶ್, ನೆನಪಿರಲಿ ಪ್ರೇಮ್, ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜಯತೀರ್ಥ ಸೇರಿದಂತೆ ಚಿತ್ರರಂಗದ ಸಾಕಷ್ಟು ಮಂದಿ ಭಾಗವಹಿಸಿದ್ದರು. ಝೈದ್ ಖಾನ್ ಗೆ ಜೋಡಿಯಾಗಿ ನಟಿ ಸೋಲ್ ಮೊಂತೇರೋ ಕಾಣಿಸಿಕೊಂಡಿದ್ದಾರೆ. ಬನಾರಸ್ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಏಕಕಾಲದಲ್ಲಿ ತಯಾರಾಗಿದ್ದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಬಿಡುಗಡೆ ಆಗುತ್ತಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಬನಾರಸ್ ಚಿತ್ರ ನವೆಂಬರ್ 4ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಝೈದ್ ಹಾಗೂ ಸೋನಲ್ ಜೊತೆ ಸುಜಯ್ ಶಾಸ್ತ್ರಿ,  ದೇವರಾಜ್, ಅಚ್ಯುತ್ ಕುಮಾರ್, ಸಪ್ನಾ ರಾಜ್, ಬರ್ಖತ್ ಅಲಿ ಮುಂತಾದವರು ಕಾಣಿಸಿಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now